Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:2 - ಕನ್ನಡ ಸಮಕಾಲಿಕ ಅನುವಾದ

2 ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆ ಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆಹೋದರೆ ಆ ಪಶುವನ್ನು ನಿಮ್ಮ ಮನೆಗೆ ಹೊಡಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ತಿರಿಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಪಶುವಿನ ಧಣಿ ಯಾರೆಂದು ನಿಮಗೆ ಗೊತ್ತಾಗದಿದ್ದರೆ ಅಥವಾ ಅವನು ನಿಮಗೆ ತುಂಬಾ ದೂರದಲ್ಲಿದ್ದರೆ ಅದರ ಧಣಿಯು ಅದನ್ನು ಹುಡುಕಿಕೊಂಡು ಬರುವ ತನಕ ನೀವು ಪಶುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಅವನು ಬಂದಾಗ ಅದನ್ನು ಹಿಂದಿರುಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:2
4 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.


ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.


ಅವನ ಕತ್ತೆಯಾಗಲಿ, ಅವನ ವಸ್ತ್ರವಾಗಲಿ, ನಿನ್ನ ಸಹೋದರನು ಕಳೆದುಕೊಂಡ ಯಾವ ವಸ್ತುಗಳೇ ಆಗಲಿ ನೀನು ಕಂಡುಕೊಂಡರೆ, ಹಾಗೆಯೇ ಮಾಡಬೇಕು. ನೀನು ಕಾಣದವರಂತೆ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು