ಧರ್ಮೋಪದೇಶಕಾಂಡ 22:24 - ಕನ್ನಡ ಸಮಕಾಲಿಕ ಅನುವಾದ24 ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.