Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:30 - ಕನ್ನಡ ಸಮಕಾಲಿಕ ಅನುವಾದ

30 ಯಾರೂ ತನ್ನ ತಂದೆಯ ಹೆಂಡತಿಯನ್ನು ಮದುವೆ ಮಾಡಿಕೊಳ್ಳಬಾರದು. ತನ್ನ ತಂದೆಯ ಹಾಸಿಗೆಯನ್ನು ಅಗೌರವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ತಂದೆಗೆ ಹೆಂಡತಿಯಾದವಳನ್ನು ಸಂಗವಿುಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಕೂಡಿ ತಂದೆಗೆ ಅವಮಾನ ಮಾಡಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:30
8 ತಿಳಿವುಗಳ ಹೋಲಿಕೆ  

ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


“ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.


ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.


“ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆಗ ಅವನು, “ನೀನು ಯಾರು?” ಎಂದನು. ಅದಕ್ಕವಳು, “ನಾನು ನಿಮ್ಮ ದಾಸಿಯಾದ ರೂತಳು. ನೀವು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿರಿ. ಏಕೆಂದರೆ ನೀವು ನನ್ನನ್ನು ವಿಮೋಚಿಸತಕ್ಕ ಹತ್ತಿರ ಸಂಬಂಧಿಕನು,” ಎಂದಳು.


ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು