Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:5 - ಕನ್ನಡ ಸಮಕಾಲಿಕ ಅನುವಾದ

5 ಸ್ತ್ರೀಯು ಪುರುಷನ ವಸ್ತ್ರ ಉಟ್ಟುಕೊಳ್ಳಬಾರದು, ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು. ಏಕೆಂದರೆ ಹೀಗೆ ಮಾಡುವವರೆಲ್ಲ ಯೆಹೋವ ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಹೆಂಗಸರು ಗಂಡಸರಂತೆ, ಗಂಡಸರು ಹೆಂಗಸರಂತೆ ಬಟ್ಟೆ ಹಾಕಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸ್ತ್ರೀಯು ಪುರುಷವೇಷವನ್ನೂ ಪುರುಷನು ಸ್ತ್ರೀವೇಷವನ್ನೂ ಹಾಕಿಕೊಳ್ಳಕೂಡದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಹೇಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹೆಂಗಸು ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಸರ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:5
4 ತಿಳಿವುಗಳ ಹೋಲಿಕೆ  

ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.


ನಿನ್ನ ಸಹೋದರನ ಕತ್ತೆಯಾಗಲಿ, ಎತ್ತಾಗಲಿ, ಮಾರ್ಗದಲ್ಲಿ ಬಿದ್ದಿರುವುದನ್ನು ನೋಡಿದರೆ ಅಲಕ್ಷ್ಯ ಮಾಡಬೇಡ. ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.


ನೀನು ದಾರಿಯಲ್ಲಿ ಯಾವುದಾದರೊಂದು ಗಿಡದಲ್ಲಾಗಲಿ, ನೆಲದ ಮೇಲಾಗಲಿ, ನಿನಗೆ ಮರಿಗಳುಳ್ಳ ಇಲ್ಲವೆ ಮೊಟ್ಟೆಗಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ, ಮರಿಗಳ ಮೇಲೆಯಾಗಲಿ, ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತುಕೊಂಡಿದ್ದರೆ, ಮರಿಗಳ ಸಂಗಡ ತಾಯಿಯನ್ನು ತೆಗೆದುಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು