Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:7 - ಕನ್ನಡ ಸಮಕಾಲಿಕ ಅನುವಾದ

7 ನಿನಗೆ ಒಳ್ಳೆಯದಾಗುವ ಹಾಗೆಯೂ ಬಹುಕಾಲ ಬಾಳುವ ಹಾಗೆಯೂ ಹೇಗಾದರೂ ತಾಯಿಯನ್ನು ಕಳುಹಿಸಿಬಿಟ್ಟು, ಮರಿಗಳನ್ನು ತೆಗೆದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಹೀಗೆ ನಡೆದುಕೊಂಡರೆ, ನಿಮಗೆ ಶ್ರೇಯಸ್ಸುಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸುಂಟಾಗುವದು. ಮತ್ತು ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ತಾಯಿಪಕ್ಷಿಯನ್ನು ಬಿಟ್ಟು ಮರಿಪಕ್ಷಿಗಳನ್ನು ಕೊಂಡೊಯ್ಯಬಹುದು. ಈ ನಿಯಮಗಳನ್ನು ನೀವು ಪಾಲಿಸಿದರೆ ನೀವು ಬಹುಕಾಲ ಬದುಕುವಿರಿ ಮತ್ತು ನಿಮಗೆ ಶುಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:7
5 ತಿಳಿವುಗಳ ಹೋಲಿಕೆ  

ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.


ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.


ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.


ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು