Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:8 - ಕನ್ನಡ ಸಮಕಾಲಿಕ ಅನುವಾದ

8 ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:8
20 ತಿಳಿವುಗಳ ಹೋಲಿಕೆ  

ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.


ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ”


ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?


ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.


ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.


ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು.


ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.


“ಬೆಂಕಿಹತ್ತಿ ಅದು ಮುಳ್ಳಿನ ಕೊಂಪೆಗೆ ತಗುಲಿ, ಸಿವುಡುಗಳ ಬಣವೆಗಳನ್ನಾಗಲಿ, ನಿಂತ ಬೆಳೆಯನ್ನಾಗಲಿ, ಹೊಲವನ್ನಾಗಲಿ ಸುಟ್ಟುಬಿಟ್ಟರೆ, ಆ ಬೆಂಕಿಯನ್ನು ಹಚ್ಚಿದವನು ಖಂಡಿತವಾಗಿ ಈಡು ಕೊಡಬೇಕು.


“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.


ನಿನಗೆ ಒಳ್ಳೆಯದಾಗುವ ಹಾಗೆಯೂ ಬಹುಕಾಲ ಬಾಳುವ ಹಾಗೆಯೂ ಹೇಗಾದರೂ ತಾಯಿಯನ್ನು ಕಳುಹಿಸಿಬಿಟ್ಟು, ಮರಿಗಳನ್ನು ತೆಗೆದುಕೊಳ್ಳಬಹುದು.


ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು.


ಅವರು ಗುಡ್ಡದಿಂದ ಪಟ್ಟಣಕ್ಕೆ ಇಳಿದು ಬಂದಾಗ ಸಮುಯೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು