Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:16 - ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಒಳ್ಳೆಯದೆಂದು ತೋಚುತ್ತದೆಯೋ, ಅಲ್ಲಿಯೇ ವಾಸವಾಗಲಿ. ಅವನನ್ನು ನೀವು ಕುಗ್ಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನೀವು ಶೋಷಣೆಗೆ ಗುರಿಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ನಿರ್ಬಂಧಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:16
10 ತಿಳಿವುಗಳ ಹೋಲಿಕೆ  

“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.


“ಪರದೇಶಿಯರನ್ನು ಪೀಡಿಸಬಾರದು. ಏಕೆಂದರೆ ಈಜಿಪ್ಟ್ ದೇಶದಲ್ಲಿ ನೀವೂ ಪರದೇಶಿಗಳಾದ್ದಿರಷ್ಟೇ, ಅಂಥವರ ಮನೋವ್ಯಥೆಯನ್ನು ನಿಮಗೆ ತಿಳಿದಿದೆ.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು.


ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;


ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು