Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:17 - ಕನ್ನಡ ಸಮಕಾಲಿಕ ಅನುವಾದ

17 ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ಗುಡಿ ವೇಶ್ಯೆಯಾಗಬಾರದು. ಇಸ್ರಾಯೇಲರಲ್ಲಿ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಗುದಮೈಥುನಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:17
15 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.


ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು.


“ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.


ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು.


ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಜಾರಿಣಿಯಿಂದಲೂ ದಾರಿತಪ್ಪಿದ ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು.


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು.


ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.


“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು