ಧರ್ಮೋಪದೇಶಕಾಂಡ 24:15 - ಕನ್ನಡ ಸಮಕಾಲಿಕ ಅನುವಾದ15 ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.