ಧರ್ಮೋಪದೇಶಕಾಂಡ 24:18 - ಕನ್ನಡ ಸಮಕಾಲಿಕ ಅನುವಾದ18 ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು. ಅಧ್ಯಾಯವನ್ನು ನೋಡಿ |