Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:19 - ಕನ್ನಡ ಸಮಕಾಲಿಕ ಅನುವಾದ

19 ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತು ಬಂದರೆ ಅದನ್ನು ತರುವದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:19
23 ತಿಳಿವುಗಳ ಹೋಲಿಕೆ  

“ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.


ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.


ಅವಳು ಹಕ್ಕಲಾದುಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡುಗಳಲ್ಲಿ ಕೆಲವನ್ನು ಕೆಳಗೆ ಹಾಕಿರಿ. ಅವಳನ್ನು ಗದರಿಸಬೇಡಿರಿ,” ಎಂದನು.


ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.


ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.


ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು