Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:22 - ಕನ್ನಡ ಸಮಕಾಲಿಕ ಅನುವಾದ

22 ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿ ವಾಸವಾಗಿದ್ದಿರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ಈ ಎಲ್ಲಾ ಕಾರ್ಯಗಳನ್ನು ಮಾಡಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವೆ ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ಈಜಿಪ್ಟ್ ದೇಶದಲ್ಲಿ ಬಡ ಗುಲಾಮರಾಗಿದ್ದುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆದ್ದರಿಂದಲೇ ಬಡವರಿಗೆ ನೀವು ಹೀಗೆ ಮಾಡಬೇಕೆಂದು ನಿಮಗೆ ತಿಳಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:22
9 ತಿಳಿವುಗಳ ಹೋಲಿಕೆ  

ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು