Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:3 - ಕನ್ನಡ ಸಮಕಾಲಿಕ ಅನುವಾದ

3 ಆ ಮತ್ತೊಬ್ಬ ಗಂಡನು ಅವಳನ್ನು ಹಗೆಮಾಡಿ, ವಿವಾಹ ವಿಚ್ಛೇದನ ಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು, ತನ್ನ ಮನೆಯಿಂದ ಕಳುಹಿಸಿಬಿಟ್ಟರೆ, ಇಲ್ಲವೆ ಆ ಎರಡನೆಯ ಗಂಡನು ಸತ್ತರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3-4 ಆಕೆಯ ಹೊಸ ಗಂಡನೂ ಆಕೆಯನ್ನು ಇಷ್ಟಪಡದೆ ಮನೆಯಿಂದ ಹೊರಗೆ ಕಳುಹಿಸಿದರೆ ಅಥವಾ ಎರಡನೆ ಗಂಡನು ಸತ್ತುಹೋದರೆ ಆಕೆಯ ಮೊದಲನೆಯ ಗಂಡನು ಆಕೆಯನ್ನು ಮತ್ತೆ ಮದುವೆಯಾಗಬಾರದು. ಅವನಿಗೆ ಆಕೆಯು ಅಶುದ್ಧಳಾದಳು. ಅವನು ಆಕೆಯನ್ನು ಮತ್ತೆ ಮದುವೆಯಾದಲ್ಲಿ ಅವನು ಯೆಹೋವನಿಗೆ ಅಸಹ್ಯವಾದದ್ದನ್ನು ಮಾಡುವವನಾಗಿದ್ದಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಇಂಥ ಪಾಪಗಳನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:3
7 ತಿಳಿವುಗಳ ಹೋಲಿಕೆ  

“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.


ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.


ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು.


ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು