ಧರ್ಮೋಪದೇಶಕಾಂಡ 24:5 - ಕನ್ನಡ ಸಮಕಾಲಿಕ ಅನುವಾದ5 ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನು ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದವರೆಗೆ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು, ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇವಿುಸಬಾರದು; ಅವನು ಒಂದು ವರುಷದವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಒಬ್ಬನು ಹೊಸದಾಗಿ ಮದುವೆಯಾಗಿದ್ದಲ್ಲಿ ಅವನನ್ನು ಸೈನ್ಯಕ್ಕೆ ಕಳುಹಿಸಬಾರದು; ವಿಶೇಷವಾದ ಜವಾಬ್ದಾರಿಯನ್ನು ಅವನಿಗೆ ಕೊಡಬಾರದು. ಒಂದು ವರ್ಷ ಅವನು ಮನೆಯಲ್ಲಿದ್ದುಕೊಂಡು ತನ್ನ ಹೆಂಡತಿಯನ್ನು ಸಂತೋಷಪಡಿಸಬೇಕು. ಅಧ್ಯಾಯವನ್ನು ನೋಡಿ |