Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:11 - ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:11
19 ತಿಳಿವುಗಳ ಹೋಲಿಕೆ  

ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ?


ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.


ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.


ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.


ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು