ಧರ್ಮೋಪದೇಶಕಾಂಡ 26:12 - ಕನ್ನಡ ಸಮಕಾಲಿಕ ಅನುವಾದ12 ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ತಾಯಿತಂದೆಯಿಲ್ಲದವರೂ ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು. ಅಧ್ಯಾಯವನ್ನು ನೋಡಿ |