ಧರ್ಮೋಪದೇಶಕಾಂಡ 26:15 - ಕನ್ನಡ ಸಮಕಾಲಿಕ ಅನುವಾದ15 ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’ ಅಧ್ಯಾಯವನ್ನು ನೋಡಿ |