Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:17 - ಕನ್ನಡ ಸಮಕಾಲಿಕ ಅನುವಾದ

17 ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಮಗೆ ಯೆಹೋವನೇ ದೇವರಾಗಿರುವನೆಂದೂ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಆತನ ಮಾತಿಗೆ ಲಕ್ಷ್ಯವಿಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ನಿಮ್ಮ ದೇವರೆಂದು ನೀವು ಈ ದಿನ ಪ್ರತಿಜ್ಞೆ ಮಾಡಿದ್ದೀರಿ. ಆತನು ಹೇಳಿದ ಎಲ್ಲಾ ಕಟ್ಟಳೆ, ವಿಧಿ, ನಿಯಮಗಳನ್ನು ಅನುಸರಿಸುವಿರೆಂದು ಪ್ರತಿಜ್ಞೆ ಮಾಡಿರುತ್ತೀರಿ. ಆತನು ಹೇಳಿದ್ದನ್ನೆಲ್ಲಾ ಮಾಡುವುದಾಗಿ ಹೇಳಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:17
26 ತಿಳಿವುಗಳ ಹೋಲಿಕೆ  

ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು.


ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆಯಿರಿ.


ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು.


ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು.


ಜನರೆಲ್ಲಾ ಒಂದಾಗಿ ಉತ್ತರಕೊಟ್ಟು, “ಯೆಹೋವ ದೇವರು ಹೇಳಿದ್ದನ್ನೆಲ್ಲಾ ಮಾಡುತ್ತೇವೆ,” ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ಹೇಳಿದನು.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ,” ಎಂದನು. ಅದಕ್ಕವರು, “ಹೌದು, ನಾವೇ ಸಾಕ್ಷಿಗಳಾಗಿದ್ದೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು