ಧರ್ಮೋಪದೇಶಕಾಂಡ 26:19 - ಕನ್ನಡ ಸಮಕಾಲಿಕ ಅನುವಾದ19 ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.” ಅಧ್ಯಾಯವನ್ನು ನೋಡಿ |