Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:2 - ಕನ್ನಡ ಸಮಕಾಲಿಕ ಅನುವಾದ

2 ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿಯೂ ನೀವು ಕೆಲವು ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:2
33 ತಿಳಿವುಗಳ ಹೋಲಿಕೆ  

“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ?


ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.


ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು,” ಎಂದು ಹೇಳಿದರು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.


ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.


ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.


ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು.


“ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.


ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.


ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು