Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:24 - ಕನ್ನಡ ಸಮಕಾಲಿಕ ಅನುವಾದ

24 ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಅವರು, ‘ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು - ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:24
12 ತಿಳಿವುಗಳ ಹೋಲಿಕೆ  

“ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.


“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


“ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.


“ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು