ಧರ್ಮೋಪದೇಶಕಾಂಡ 28:11 - ಕನ್ನಡ ಸಮಕಾಲಿಕ ಅನುವಾದ11 ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ. ಅಧ್ಯಾಯವನ್ನು ನೋಡಿ |
ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.