Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:13 - ಕನ್ನಡ ಸಮಕಾಲಿಕ ಅನುವಾದ

13 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ತೊಲಗದೆ ಬೇರೆ ದೇವರುಗಳನ್ನು ಅವಲಂಬಿಸದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು; ನೀವು ಎಲ್ಲರಿಗಿಂತಲೂ ಮೇಲಣವರಾಗಿರುವಿರೇ ಹೊರತು ಕೆಳಗಣವರಾಗಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:13
11 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ.


ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.


ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ಅವರು ನಿಮಗೆ ಸಾಲ ಕೊಡುವರು ಆದರೆ ನೀವು ಅವರಿಗೆ ಸಾಲಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಅವರು ನಿಮಗೆ ಶಿರಸ್ಸಾಗುವರು ಆದರೆ ನೀವು ಅವರಿಗೆ ಅಧೀನರಾಗುವಿರಿ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು