Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:14 - ಕನ್ನಡ ಸಮಕಾಲಿಕ ಅನುವಾದ

14 ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:14
9 ತಿಳಿವುಗಳ ಹೋಲಿಕೆ  

ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.


“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು. ನೀವು ನಿಮ್ಮ ದಾಸನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು