Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:15 - ಕನ್ನಡ ಸಮಕಾಲಿಕ ಅನುವಾದ

15 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:15
31 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.


ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳಿ ಪಾಲಿಸಿದರೆ, ಈ ಎಲ್ಲಾ ಆಶೀರ್ವಾದಗಳು ನಿಮ್ಮ ಮೇಲೆ ಬಂದು, ನಿಮ್ಮೊಂದಿಗಿರುವವು:


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ.


ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು.


ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು.


ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


“ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,


ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.


ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”


ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”


ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.


ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, ನಾನು ಅವುಗಳನ್ನು ಹಿಡಿಯುತ್ತೇನೆ.


ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.


ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”


ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು