Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:18 - ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ಗರ್ಭದ ಫಲಕ್ಕೂ ಪಶುಗಳ ಹಿಂಡಿಗೂ, ಕುರಿಗಳ ಮಂದೆಗಳಿಗೂ ಶಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿಗಳಿಗೂ ಅಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:18
14 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ನಿಮ್ಮ ಸಂತಾನಕ್ಕೂ ನಿಮ್ಮ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


“ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.


ನಿಮಗೆ ಪಟ್ಟಣದಲ್ಲಿಯೂ ಶಾಪ, ಹೊಲದಲ್ಲಿಯೂ ನಿಮಗೆ ಶಾಪ.


ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಶಾಪ, ಬರುವಾಗಲೂ ಶಾಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು