ಧರ್ಮೋಪದೇಶಕಾಂಡ 28:20 - ಕನ್ನಡ ಸಮಕಾಲಿಕ ಅನುವಾದ20 ನೀವು ನಿಮ್ಮ ಯೆಹೋವ ದೇವರನ್ನು ಬಿಟ್ಟ ದುಷ್ಟಕ್ರಿಯೆಯ ನಿಮಿತ್ತ, ಯೆಹೋವ ದೇವರು ನೀವು ಬೇಗ ನಾಶವಾಗುವವರೆಗೂ ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮಗೆ ಶಾಪ, ಗಲಿಬಿಲಿ ಹಾಗು ಗದರಿಕೆ ಮುಂತಾದವುಗಳನ್ನು ಉಂಟುಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು. ಅಧ್ಯಾಯವನ್ನು ನೋಡಿ |
ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.