ಧರ್ಮೋಪದೇಶಕಾಂಡ 28:22 - ಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನು ನಿಮ್ಮನ್ನು ಕ್ಷಯರೋಗ ಚಳಿಜ್ವರ ಉರಿತ ಉಷ್ಣಜ್ವರಗಳಿಂದಲೂ ದೇಶವನ್ನು ಕ್ಷಾಮದಿಂದಲೂ ಬೆಳೆಯನ್ನು ಕಾಡಿಗೆ ಬಿಸಿಗಾಳಿಗಳಿಂದಲೂ ಬಾಧಿಸಲಾಗಿ ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ಹತ್ತುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು. ಅಧ್ಯಾಯವನ್ನು ನೋಡಿ |