Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:25 - ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:25
20 ತಿಳಿವುಗಳ ಹೋಲಿಕೆ  

“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು.


ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.


ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ಆದರೆ ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಒಬ್ಬ ಶತ್ರುವು ಅವನನ್ನು ಹಿಂದಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು