ಧರ್ಮೋಪದೇಶಕಾಂಡ 28:29 - ಕನ್ನಡ ಸಮಕಾಲಿಕ ಅನುವಾದ29 ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ. ಅಧ್ಯಾಯವನ್ನು ನೋಡಿ |