Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:53 - ಕನ್ನಡ ಸಮಕಾಲಿಕ ಅನುವಾದ

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 “ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಎಂಥ ಇಕ್ಕಟ್ಟಿಗೆ ಸಿಕ್ಕಿಸುವರೆಂದರೆ, ನೀವು ನಿಮ್ಮ ಸಂತಾನವನ್ನೇ, ಅಂದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:53
11 ತಿಳಿವುಗಳ ಹೋಲಿಕೆ  

ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’


ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


ಅವಳು ಕೊರತೆಯಲ್ಲಿಯೂ, ಮುತ್ತಿಗೆಯಲ್ಲಿಯೂ, ಶತ್ರು ನಿಮಗೆ ನಿಮ್ಮ ಪಟ್ಟಣಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ, ತನ್ನ ಮಕ್ಕಳನ್ನು ಗುಪ್ತವಾಗಿ ತಿಂದುಬಿಡುವಳು.


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ಅವನು ತನಗೆ ತಿನ್ನಲಿಕ್ಕೆ ಏನೂ ಸಿಗುವುದಿಲ್ಲ ಅಂದುಕೊಂಡು, ತನ್ನ ಮಕ್ಕಳ ಮಾಂಸವನ್ನು ಇತರರಿಗೆ ಕೊಡದೆ ತಿನ್ನುವನು.


ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!


ನಿಮ್ಮ ಗರ್ಭದ ಫಲಕ್ಕೂ ಪಶುಗಳ ಹಿಂಡಿಗೂ, ಕುರಿಗಳ ಮಂದೆಗಳಿಗೂ ಶಾಪ.


ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಸಹ ತನ್ನ ಸ್ವಂತ ಸಹೋದರ ಅಥವಾ ಅವನು ಪ್ರೀತಿಸುವ ಹೆಂಡತಿ ಅಥವಾ ಉಳಿದಿರುವ ಮಕ್ಕಳ ಮೇಲೆ ಅನುಕಂಪ ತೋರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು