Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:55 - ಕನ್ನಡ ಸಮಕಾಲಿಕ ಅನುವಾದ

55 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ಅವನು ತನಗೆ ತಿನ್ನಲಿಕ್ಕೆ ಏನೂ ಸಿಗುವುದಿಲ್ಲ ಅಂದುಕೊಂಡು, ತನ್ನ ಮಕ್ಕಳ ಮಾಂಸವನ್ನು ಇತರರಿಗೆ ಕೊಡದೆ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಅವನಿಗೆ ಊಟಕ್ಕೇನೂ ಇಲ್ಲದಿರುವುದರಿಂದ ಸ್ವಂತ ಮಕ್ಕಳನ್ನೇ ತಿನ್ನುವನು. ಅವರನ್ನು ಇತರರೊಂದಿಗೆ ಹಂಚಿಕೊಳ್ಳದೆ, ತನ್ನ ಸ್ವಂತ ಕುಟುಂಬದವರೊಂದಿಗೆ ಹಂಚಿಕೊಳ್ಳದೆ ತಾನೊಬ್ಬನೇ ತಿನ್ನುವನು. ನಿಮ್ಮ ವೈರಿಗಳು ಬಂದು ನಿಮ್ಮ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ನಿಮಗೆ ಇವೆಲ್ಲಾ ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:55
7 ತಿಳಿವುಗಳ ಹೋಲಿಕೆ  

ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.


ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.


ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಸಹ ತನ್ನ ಸ್ವಂತ ಸಹೋದರ ಅಥವಾ ಅವನು ಪ್ರೀತಿಸುವ ಹೆಂಡತಿ ಅಥವಾ ಉಳಿದಿರುವ ಮಕ್ಕಳ ಮೇಲೆ ಅನುಕಂಪ ತೋರಿಸುವುದಿಲ್ಲ.


ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವಳೂ, ಬಹಳ ಸೂಕ್ಷ್ಮ ಗುಣವುಳ್ಳವಳೂ, ನೆಲಕ್ಕೆ ಅಂಗಾಲನ್ನು ಸಹ ಇಡದ ಮಹಿಳೆಯು, ತನ್ನ ಮಗ್ಗುಲಲ್ಲಿರುವ ಗಂಡನ ಕಡೆಗೂ ಹೆತ್ತ ಪುತ್ರಪುತ್ರಿಯರ ಕಡೆಗೂ ಕಠಿಣವಾಗಿರುವಳು.


ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು