ಧರ್ಮೋಪದೇಶಕಾಂಡ 28:8 - ಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು. ಅಧ್ಯಾಯವನ್ನು ನೋಡಿ |