Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:9 - ಕನ್ನಡ ಸಮಕಾಲಿಕ ಅನುವಾದ

9 ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಗಳನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:9
17 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.


ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”


ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು