Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:1
24 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.


ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,


ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.


“ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.


ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.


ಈ ನಿಯಮದ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಯೆಹೋವ ದೇವರು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವರು.


ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.


ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.


ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ.


ಮೋಶೆಯು ಎಲ್ಲಾ ಇಸ್ರಾಯೇಲರನ್ನು ಕರೆದು ಅವರಿಗೆ ಹೀಗೆ ಹೇಳಿದನು: ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣು ಮುಂದೆಯೇ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.


ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ಇವರು ದೇವರ ಸೂಚಕಕಾರ್ಯಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು