Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:10 - ಕನ್ನಡ ಸಮಕಾಲಿಕ ಅನುವಾದ

10 ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ ಪುರುಷರೇ, ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:10
18 ತಿಳಿವುಗಳ ಹೋಲಿಕೆ  

ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು,


ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.


ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.


ನಿಮ್ಮ ಮಕ್ಕಳೂ ಹೆಂಡತಿಯರೂ ನಿಮ್ಮ ಪಾಳೆಯದಲ್ಲಿರುವ ಪರದೇಶಿಯರೂ ನಿಮಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವವರೂ ಸಹ


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಅದು ಏನೆಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರು ಜೀವದಿಂದ ಇರಲಿ. ಆದರೆ ಅವರು ಇಸ್ರಾಯೇಲಿನ ಎಲ್ಲಾ ಸಮೂಹಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಪ್ರಧಾನರ ಮಾತಿನಂತೆಯೇ ಆಯಿತು.


ಯೆಹೋವ ದೇವರು ತಿರುಗಿ ಶೀಲೋವಿನಲ್ಲಿ ಕಾಣಿಸಿಕೊಂಡರು. ಏಕೆಂದರೆ ಶೀಲೋವಿನಲ್ಲಿ ಯೆಹೋವ ದೇವರು ವಾಕ್ಯದ ಮೂಲಕ ಸಮುಯೇಲನಿಗೆ ಪ್ರಕಟಿಸಿಕೊಂಡರು.


ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.


ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು