Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:11 - ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ಮಕ್ಕಳೂ ಹೆಂಡತಿಯರೂ ನಿಮ್ಮ ಪಾಳೆಯದಲ್ಲಿರುವ ಪರದೇಶಿಯರೂ ನಿಮಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವವರೂ ಸಹ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:11
16 ತಿಳಿವುಗಳ ಹೋಲಿಕೆ  

ಬೇರೆ ಜನಸಮೂಹವೂ ಕುರಿದನ ಮೊದಲಾದ ಪಶುಗಳ ಬಹುದೊಡ್ಡ ಹಿಂಡೂ ಇಸ್ರಾಯೇಲರ ಸಂಗಡ ಹೋದವು.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.


ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?


ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ


ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.


“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.


ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನ್ ನದಿಯ ಕಡೆಗೆ ಬಂದು ಅಲ್ಲಿ ಮರಗಳನ್ನು ಕಡಿದರು.


ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು