Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:17 - ಕನ್ನಡ ಸಮಕಾಲಿಕ ಅನುವಾದ

17 ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ, ಕಲ್ಲು, ಬೆಳ್ಳಿ, ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೀವು ಖಂಡಿತವಾಗಿ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ ಕಲ್ಲು ಬೆಳ್ಳಿ ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ಕಂಡೇ ಕಂಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:17
6 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಏಕೆಂದರೆ ನಾವು ಈಜಿಪ್ಟ್ ದೇಶದಲ್ಲಿ ಹೇಗೆ ವಾಸವಾಗಿದ್ದೆವೆಂದೂ, ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿ ಬಂದೆವೆಂದೂ ನಿಮಗೆ ತಿಳಿದಿದೆ.


ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.


ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು