Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:19 - ಕನ್ನಡ ಸಮಕಾಲಿಕ ಅನುವಾದ

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:19
33 ತಿಳಿವುಗಳ ಹೋಲಿಕೆ  

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.


“ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಸಿರಿ ಬಂದಾಗ ಜನರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನಸ್ತುತಿಯಿಂದಲೂ ಕೂಡಿದವನಾದರೂ


ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.


ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.


ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.


ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


“ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.


ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು