Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:20 - ಕನ್ನಡ ಸಮಕಾಲಿಕ ಅನುವಾದ

20 ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20-21 ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:20
41 ತಿಳಿವುಗಳ ಹೋಲಿಕೆ  

ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ?


ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?


ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ಆಗ ಅವರು ನನಗೆ, “ಮನುಷ್ಯಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದ ಪ್ರವೇಶದ್ವಾರದ ಮುಂದೆ ನಿಂತಿತ್ತು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.


ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,


ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.


ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.


ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನೆಂದು ಯೆಹೋವ ದೇವರು ಹೇಳದೇ ಇದ್ದುದರಿಂದ, ಯೋವಾಷನ ಮಗ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದರು.


ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?


ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು