23 ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.
23 ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
23 ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.
23 ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -
23 ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”
“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.
ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.
“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.
ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.