Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:25
20 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.”


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಅವರು ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದ್ದಾರೆ.


ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.


ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು.


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


“ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ


‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.


“ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು