Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:27 - ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ಯೆಹೋವ ದೇವರು ಇಸ್ರಾಯೇಲ್ ದೇಶದ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ಕಾರಣಕ್ಕಾಗಿಯೇ ದೇವರು ಅವರ ಮೇಲೆ ಸಿಟ್ಟುಗೊಂಡು ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನು ಅವರಿಗೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:27
14 ತಿಳಿವುಗಳ ಹೋಲಿಕೆ  

ಅವರು ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದ್ದಾರೆ.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಎಂದೆಂದಿಗೂ ನಮ್ಮ ಮೇಲೆ ಖಂಡಿಸುವಿರೋ? ತಲತಲಾಂತರಕ್ಕೂ ನಿಮ್ಮ ಬೇಸರ ಬೆಳೆಸುವಿರೋ?


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು