Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:28 - ಕನ್ನಡ ಸಮಕಾಲಿಕ ಅನುವಾದ

28 ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:28
24 ತಿಳಿವುಗಳ ಹೋಲಿಕೆ  

ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.


ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.


ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.


ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.


‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.


“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.


“ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ?


ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.


ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು