Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:11 - ಕನ್ನಡ ಸಮಕಾಲಿಕ ಅನುವಾದ

11 ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 (ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 (ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:11
15 ತಿಳಿವುಗಳ ಹೋಲಿಕೆ  

ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.


ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.


ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.


ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು.


ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು.


ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು