ಧರ್ಮೋಪದೇಶಕಾಂಡ 3:12 - ಕನ್ನಡ ಸಮಕಾಲಿಕ ಅನುವಾದ12 ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಆ ಕಾಲದಲ್ಲಿ ನಾವು ಆ ನಾಡನ್ನೆಲ್ಲ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳು ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು. ಅಧ್ಯಾಯವನ್ನು ನೋಡಿ |