Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:14 - ಕನ್ನಡ ಸಮಕಾಲಿಕ ಅನುವಾದ

14 ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 (ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:14
14 ತಿಳಿವುಗಳ ಹೋಲಿಕೆ  

ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.


ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;


ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ.


ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ಮಿಕ್ಕ ಗಿಲ್ಯಾದನ್ನು ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಗೋತ್ರಕ್ಕೆ ಕೊಟ್ಟೆನು. ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಸೀಮೆಯನ್ನೂ, ರೆಫಾಯರ ದೇಶವೆಂದು ಎನಿಸಿಕೊಳ್ಳುವ ಸಮಸ್ತ ಬಾಷಾನನ್ನೂ ಅವರಿಗೆ ಕೊಟ್ಟೆನು.


ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.


ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೂ ಸಮಾಧಿಯೇ ಅವರಿಗೆ ಶಾಶ್ವತಮಂದಿರವು. ಅದೇ ಅವರ ತಲತಲಾಂತರಕ್ಕೂ ನಿವಾಸಸ್ಥಾನ.


ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.


ಯಾಯೀರಿನವನಾದ ಈರನೂ ದಾವೀದನ ಯಾಜಕನಾಗಿದ್ದನು.


ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು