ಧರ್ಮೋಪದೇಶಕಾಂಡ 3:18 - ಕನ್ನಡ ಸಮಕಾಲಿಕ ಅನುವಾದ18 ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು. ಅಧ್ಯಾಯವನ್ನು ನೋಡಿ |