Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:22 - ಕನ್ನಡ ಸಮಕಾಲಿಕ ಅನುವಾದ

22 ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಕಡೆಯವನಾಗಿ ಯುದ್ಧಮಾಡುವನು ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧ ಮಾಡುವನು’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:22
16 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.


ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.


ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.


ಆ ಕಾಲದಲ್ಲಿ ನಾನು ಯೆಹೋವ ದೇವರಿಗೆ:


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ, ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವರು,” ಎಂದು ಹೇಳಿದೆನು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು