ಧರ್ಮೋಪದೇಶಕಾಂಡ 3:26 - ಕನ್ನಡ ಸಮಕಾಲಿಕ ಅನುವಾದ26 ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೆ ಸರ್ವೇಶ್ವರ ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಗೊಂಡರು. ನನ್ನ ಮನವಿಯನ್ನು ಕೇಳದೆ, ‘ಸಾಕು; ಇದರ ಬಗ್ಗೆ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಜೋರ್ಡನ್ ನದಿಯನ್ನು ದಾಟಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ - ಸಾಕು; ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಯೊರ್ದನ್ ಹೊಳೆಯನ್ನು ದಾಟಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ಈ ವಿಷಯವನ್ನು ನೀನು ಎತ್ತಬಾರದು. ಅಧ್ಯಾಯವನ್ನು ನೋಡಿ |